ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನವು ವೈದ್ಯರಿಗೆ ನೆರವಾಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.
ಬಾಲಬ್ರೂಯಿಯಲ್ಲಿ ಐಸಿಯು ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ bದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದಿದ್ದಾರೆ.