Friday, August 19, 2022

Latest Posts

ತಂದೆಯವರ ಆರೋಗ್ಯ ಸ್ಥಿರವಾಗಿದೆ, ಆತಂಕ ಬೇಡ: ಬಿ.ವೈ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ದೃಢಪಟ್ಟಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಅವರ ಪುತ್ರ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ತಂದೆಯವರನ್ನು ಮುಂಜಾಗರೂತಕೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಅವರಿಗೆ ಯಾವುದೋ ರೋಗ ಲಕ್ಷಣ ಇಲ್ಲ. ಆರೋಗ ಸ್ಥಿತಿ ಸಹಜವಾಗಿದೆ. ತಜ್ಞರು ನಿರಂತರ ನಿಗಾ ವಹಿಸಿದ್ದಾರೆ. ಯಾರೂ ಆತಂಕ ಪಡುವ ಅವಶ್ಯ ಇಲ್ಲ. ಇದ್ದಲ್ಲಿಂದಲೇ ಹಾರೈಸಿ. ನಾನೂ ಕೂಡ ಕ್ವಾರೆಂಟೀನ್‌ನಲ್ಲಿ ಇದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!