ಮೈಸೂರು: ಕೊರೋನಾ ಪಿಡುಗಿನ ಬಿಗಿ ಸಂದರ್ಭದಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಶುಕ್ರವಾರ ತಂಬಾಕು ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ತಂಬಾಕು ಹರಾಜು ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಲ್ಕುಂದ ತಂಬಾಕು ಮಾರುಕಟ್ಟೆಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಹರಾಜು ಪ್ರಕ್ರಿಯೆಯನ್ನು ಪರಿಶೀಲಿಸಿದ ಅವರು, ತಂಬಾಕು ಬೆಳೆಗಾರರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ತಂಬಾಕು ಪ್ರಕ್ರಿಯೆಗೆ ಸಂಬಂಧಿಸಿದಂತೆ ಚರ್ಚಿಸಿದರು.