ಹೊಸದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಕಾರಣ 6 ಜನರು ಸಜೀವ ದಹನವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ ಹಲವಾರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಡೀ ಕಾರ್ಖಾನೆಯೇ ಹೊತ್ತಿ ಉರಿಯುತ್ತಿದ್ದು, ಕಾರ್ಖಾನೆಯಲ್ಲಿನ ಯಂತ್ರ, ಉಪಕರಣಗಳು ಅಗ್ನಿಗೆ ಆಹುತಿಯಾಗಿ ಅಗ್ನಿ ಕೆನ್ನಾಲಿಗೆ ಜೋರಾಗಿ ವ್ಯಾಪಿಸುತ್ತಲೇ ಇದೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದು, ಇದುವರೆಗೆ ಸ್ಪೋಟಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.