Wednesday, July 6, 2022

Latest Posts

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ್ದರೆ 22 ಮಂದಿಗೆ ಗಾಯಗಳಾಗಿವೆ.
ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಈ ಅವಘಡ ನಡೆದಿದ್ದು, ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಸಟ್ಟೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತದೇಹಗಳು ಸಂಪೂರ್ಣ ಸುಟ್ಟಿರುವುದರಿಂದ ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಘಟನೆ ವರದಿಯಾದ ಬೆನ್ನಲ್ಲೇ ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿಗಳು ಹಾಗೂ ಐವರು ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟದಲ್ಲಿ 10 ಕೋಠಡಿಗಳು ನಾಶವಾಗಿದ್ದು, ಘಟನೆ ನಡೆದಾಗ ಕನಿಷ್ಟ 50 ಮಂದಿ ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೇಶನ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss