ಹೊಸ ದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡಿನ ರಾಜಧಾನಿ ಚೆನ್ನೈಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಭರ್ಜರಿ ಎಂಟ್ರಿ ನೀಡಿದ್ದಾರೆ!
ಶನಿವಾರ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಬಳಿಕ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರನ್ನು ಗಮನಿಸಿ ನಡೆದುಕೊಂಡೇ ಮುಂದೆ ಸಾಗಿ ಅಚ್ಚರಿ ಮೂಡಿಸಿದರು.
ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಎಡಿಎಂಕೆ ಮತ್ತು ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು.