ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕಮಲ್ ಹಾಸನ್ ಅವರ ಆಪ್ತ ಎಂಎನ್ಎಂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಎ.ಅರುಣಾಚಲಂ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚನೈನಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಎ.ಅರುಣಾಚಲಂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಟ ಕಮಲ್ ಹಾಸನ್ ಈಗಗಾಲೇ ಭರ್ಜರಿ ಸಿದ್ಧತೆ ನಡೆಸಿದ್ದು, “ಮಕ್ಕಳ ನಿಧಿ ಮಯ್ಯಂ” ಪಕ್ಷದ ವತಿಯಿಂದ ಚುನಾವಣಾ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಇದೀಗ ಎ.ಅರುಣಾಚಲಂ ಬಿಜೆಪಿ ಸೇರ್ಪಡೆಯಾರುವುದು ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.