ಹೊಸ ದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡು ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಬ್ಯಾಟರಿ ಟಾರ್ಚ್ ಲೈಟ್ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ.
ಕಮಲ್ ಅವರ ‘ಮಕ್ಕಳ್ ನೀದಿ ಮಯ್ಯುಂ’ ಪಕ್ಷಕ್ಕೆ ತಮಗೆ ಟಾರ್ಚ್ ಲೈಟ್ ಚಿಹ್ನೆ ನೀಡಬೇಕೆಂದು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಕೇಂದ್ರ ಚುನಾವಣಾ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರ ಪಕ್ಷ ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ಇದೇ ಚಿಹ್ನೆಯಡಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ವಿಧಾನಸಭೆ ಚುನಾವಣೆಗೂ ಇದೇ ಚಿಹ್ನೆ ನೀಡಬೇಕೆಂದು ಮನವಿ ಮಾಡಲಾಗಿತ್ತು.