ಹೊಸದಿಗಂತ ಆನ್ಲೈನ್ ಡೆಸ್ಕ್:
ವಿಧಾನ ಪರಿಷತ್ನ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಅಂತ್ಯಕ್ರಿಯೆ ಅವರ ನೆಚ್ಚಿನ ತೋಟದ ಮನೆಯಲ್ಲಿ ನೆರವೇರಲಿದೆ.
ಸಖರಾಯಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈಲಿಗೆ ತಲೆ ಕೊಟ್ಟು ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದು,ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಧರ್ಮೇಗೌಡರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಸಖರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.