Sunday, June 26, 2022

Latest Posts

ತಲೈವಾಗೆ ಆಸ್ಪತ್ರೆಯಲ್ಲಿ ಫುಲ್ ರೆಸ್ಟ್: ಸಂದರ್ಶಕರಿಗೆ ನೋ ಎಂಟ್ರಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಹೈದರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು, ಅವರನ್ನು  ಭೇಟಿ ಮಾಡಲು ಯಾವುದೇ ಸಂದರ್ಶಕರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಆಸ್ಪತ್ರೆಯ ಆಡಳಿತ ತಿಳಿಸಿದೆ.
ರಜನಿಕಾಂತ್ ಅವರನ್ನು  ಬೆಳಗಿನ ಜಾವ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡುಬಂದಿದ್ದ ಕಾರಣ ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ. ಇದು ಹೊರತುಪಡಿಸಿ ಅವರಿಗೆ ಬೇರೆ ಯಾವುದೇ ರೋಗ ಲಕ್ಷಣಗಳಿಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಡಿ.೨೨ರಂದು ರಜನಿಕಾಂತ್ ಕೊರೊನಾ ಪರೀಕ್ಷೆ ನಡೆಸಿದ್ದು ವರದಿ ನೆಗೆಟಿವ್ ಬಂದಿತ್ತು. ತಲೈವಾ ಕಳೆದ ೧೦ ದಿನಗಳಿಂದ ಹೈದರಾಬಾದ್‌ನಲ್ಲಿ ತಮ್ಮ ’ಅನ್ನಾತೆ’ ಚಿತ್ರದ ಶೂಟಿಂಗ್‌ನಲ್ಲಿದ್ದರು. ಈ ನಡುವೆ ಅವರ ರೋಗ್ಯದಲ್ಲಿ ಏರುಪೇರು ಕಂಡುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss