ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಗುಜರಾತ್ನ ಸೂರತ್ನಿಂದ ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನವನ್ನು ಧಿಡೀರ್ ಕಾಣಿಸಿಕೊಂಡ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಇಂಡಿಗೋ ಏರ್ಲೈನ್ಸ್ಗೆ ಸೇರಿದ ವಿಮಾನ ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದು, ಈ ವೇಳೆ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಭೋಪಾಲ್ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ವಿಮಾನದಲ್ಲಿ ಸುಮಾರು 172 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ವಿಮಾನದಲ್ಲಿನ ತಾಂತ್ರಿಕ ಸಮಸ್ಯೆ ಏನು ಎಂಬುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.