Monday, August 15, 2022

Latest Posts

ತಾತನಾದ ಸಂಭ್ರಮದಲ್ಲಿ ಮುಕೇಶ್ ಅಂಬಾನಿ 

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಿಶ್ವದ ಟಾಪ್ 10 ಶ್ರೀಮಂತರಲ್ಲಿ ಒಬ್ಬರಾದ ರಿಲಾಯನ್ಸ್ ಕಂಪನಿಯ ಮುಖ್ಯಸ್ಥ ಮುಕೇಶ್ ಅಂಬಾನಿ  ತಾತನಾದ ಸಂಭ್ರಮದಲ್ಲಿದ್ದಾರೆ.

ಮುಕೇಶ್ ಅಂಬಾನಿ- ನೀತಾ ಅಂಬಾನಿ ಪುತ್ರ ಆಕಾಶ್ ಅಂಬಾನಿ ಕಳೆದ ವರ್ಷ ಶ್ಲೋಕಾ ಮೆಹ್ತಾ ಅವರನ್ನು ಮದುವೆಯಾಗಿದ್ದರು. ಗುರುವಾರ ಆಕಾಶ್ ದಂಪತಿಗೆ ಗಂಡು ಮಗು ಹುಟ್ಟಿದೆ.

ಈ ಬಗ್ಗೆ ಅಂಬಾನಿ ಕುಟುಂಬದ ವಕ್ತಾರರೊಬ್ಬರು ಸುದ್ದಿಗಾರರೊಂದಿ ಮಾತನಾಡಿ, ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದಾರೆ. ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಮಗು ಜನನವಾಗಿದೆ ಎಂದು ಹೇಳಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss