Saturday, June 25, 2022

Latest Posts

ತುಂಗಭದ್ರಾ ಜಲಾಶಯದಿಂದ 50,530 ಕ್ಯೂಸೆಕ್ಸ್‌ ನೀರು ನದಿಗೆ ಬಿಡುಗಡೆ

ಬಳ್ಳಾರಿ: ಕಳೆದ ಎರಡು ದಿನಗಳಿಂದ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಜಲಾಶಯದ 8ನೇ ಕ್ರಸ್ಟ್ ಗೇಟ್ ಮೂಲಕ 50, 530 ಕ್ಯೂಸೆಕ್ ನೀರನ್ನು ಗುರುವಾರ ನದಿಗೆ ಹರಿಬಿಡಲಾಗಿದೆ. ಸದ್ಯ ಜಲಾಶಯದಲ್ಲಿ 1632.80 ಅಡಿ ನೀರು ಇದ್ದು, 100.086 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 41,959 ಕ್ಯೂಸೆಕ್ ನೀರು ಒಳ ಹರಿವಿದೆ. ಬುಧವಾರ ಜಲಾಶಯಕ್ಕೆ 33,622 ಕ್ಯೂಸೆಕ್ ನೀರು ಹರಿದು ಬಂದಿದ್ದು, ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಸುಮಾರು ದಿನಗಳಿಂದ ಒಳಹರಿವಿನ ಪ್ರಮಾಣ ಕಡಿಮೆಯಾಗಿತ್ತು. ಈಗ ಮತ್ತೆ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ನದಿಗೆ ನೀರನ್ನು ಹರಿಸಲಾಗುವುದು.‌ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss