ಹೊಸದಿಗಂತ ಆನ್ ಲೈನ್ ಡೆಸ್ಕ್:
ತಮಿಳುನಾಡಿನ ನೀಲಗಿರಿ ಪ್ರದೇಶದ ಮಾಸಿನಗುಡಿಯಲ್ಲಿ ಆಹಾರ ಅರಸಿಕೊಂಡು ಊರಿಗೆ ಬಂದಿದ್ದ ಆನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ನಡೆದಿದೆ.
ಇದರಿಂದ ಬೆನ್ನು, ಕಿವಿ ಭಾಗಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆನೆಗೆ ತೆಪ್ಪಕಾಡು ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಆನೆ ಇಂದು ಮೃತಪಟ್ಟಿದೆ.
ಬೆಂಕಿ ತಗುಲಿ ಆನೆ ಪಾರಾಗಲು ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ತೀವ್ರ ಸುಟ್ಟ ಗಾಯಗಳಾಗಿದ್ದ ಆನೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶಿಬಿರಕ್ಕೆ ಸಾಗಿಸುವಾಗ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಾಸಿನಗುಡಿ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಶಾಂತ್, ರೇಮಂಡ್ ಡೀನ್, ರಿಕಿ ರಾಯನ್ ಅವರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.