ತುಮಕೂರು: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎರಡನೆಯ ಅವನಿಗೆ ನೇಮಕವಾಗಿರುವ ಮಾಜಿ ಶಾಸಕ ಸುರೇಶ್ ಗೌಡ ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ಜನಸಂಘದ ಶ್ಯಾಮಪ್ರಕಾಶ್ ಮುಖರ್ಜಿ ಅವರ ಬಲಿದಾನದ ದಿನದ ಅಂಗವಾಗಿ ಮತ್ತು ಬಿಜೆಪಿ ಸ್ಥಾಪಕರಾದ ಜಗನ್ನಾಥ ರಾವ್ ಜೋಷಿ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು.
ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ನಾಯಕರ ಸಹಕಾರದಿಂದ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸದೃಢ ಗೊಳಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ. ಎಂ.ಬಿ.ನಂದೀಶ್ ಹಾಜರಿದ್ದರು.