Tuesday, June 28, 2022

Latest Posts

ತುಮಕೂರು| ವಿಷಯುಕ್ತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿ ಸಾವು

ತುಮಕೂರು: ವಿಷಯುಕ್ತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿ ಸಾವನ್ನಪ್ಪಿರುವ ದುರಂತದ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ಮಂಡಲಿಯ ನಿರ್ಲಕ್ಷ್ಯತೆಯಿಂದ ರಾಸಾಯನಿಕ ಮಿಶ್ರಿತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತುಮಕೂರಿಗೆ ಹತ್ತಿರವಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಶಿವಣ್ಣ ಸಿದ್ದಗಂಗಯ್ಯ ಗಂಗಮ್ಮ ಅವರು ಸಂಜೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದ ಮಾರ್ಗವಾಗಿ ತಮ್ಮ ಕುರಿಗಳನ್ನು ಹೊಡೆದುಕೊಂಡು ಬರುತ್ತಿದ್ದರು. ಈ ವೇಳೆ ಗುಂಡಿ ಯೊಂದರಲ್ಲಿ ನಿಂತಿದ್ದ ವಿಷ ಮಿಶ್ರಿತ ನೀರು ಸೇವಿಸಿ ಸ್ಥಳದಲ್ಲೇ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಈ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕೈಗಾರಿಕೆಗಳಲ್ಲಿ ತ್ಯಾಜ್ಯವನ್ನು ನೇರವಾಗಿ ಪರಿಸರಕ್ಕೆ ಬಿಡುತ್ತಿದ್ದಾರೆ ಹಾಗೂ ನೀರಿಗೆ ಬೆರೆಸಿ ಕೆರೆ-ಕಟ್ಟೆಗಳಿಗೆ ಹರಿಸುತ್ತಾರೆ ಇದರ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅವರಿಗೆ ಬಹಳಷ್ಟು ಬಾರಿ ಮನವಿ ಮಾಡಿದ್ದರೂ ಕ್ಯಾರೆ ಎನ್ನುತ್ತಿಲ್ಲ ಕಾರಣ ಮಾಲಿನ್ಯ ಅಧಿಕಾರಿಗಳ ನಿರ್ಲಕ್ಷ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್ ರವರು ಆರೋಪಿಸಿದ್ದಾರೆ
ಘಟನಾ ಸ್ಥಳಕ್ಕೆ ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್ ಕೋರಾ ಪೊಲೀಸ್ ಠಾಣೆ ಪೊಲೀಸರು ಹಾಗೂ ಪಶು ವೈದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೈಗಾರಿಕಾ ಪ್ರದೇಶ ಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನೀರಿಗೆ ಸೇರಿದ್ದು ಅದನ್ನು ಕುರಿಗಳು ಸೇವಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ಪಶು ವೈದ್ಯರಾದ ಲೋಕೇಶ್ ರವರು ಹಾಗೂ ಕೋರಾ ಪೊಲೀಸ್ ಠಾಣೆಯ ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss