ತುಮಕೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರು ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನೀಡಲಾಗುತ್ತಿರುವ ಅನುಧಾನಗಳನ್ನು ಹೆಚ್ಚಿಸಬೇಕು.ಈಕ್ಷೇತ್ರಕ್ಕೆ ಅಗತ್ಯವಿರುವ ನೆರವನ್ನು ಕೇಂದ್ರ ಸರ್ಕಾರ ನೀಡಬೇಕು, ಹರಿಯಾಣ ಮಾದರಿ ರಾಜ್ಯದಲ್ಲಿಯೂ ಏಕರೂಪವಾದ ವೇತನ ನೀಡಬೇಕು. ಎನ್ ಹೆಚ್ ಎಂ. ಅಡಿಯಲ್ಲಿ ಕೆಲಸ ಮಾಡುವವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೋನಸ್ ಹೆಚ್ಚಳವನ್ನು ಕಾರ್ಯರೂಪಕ್ಕೆ ತರಬೇಕು.ಆರೋಗ್ಯ ಭಾಗ್ಯ ಯೋಜನೆಯನ್ನು ಹೊರಗುತ್ತಿಗೆ ನೌಕರರಿಗೂ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಮಾಧ್ಯಮ ಕಾರ್ಯದರ್ಶಿ ಹುಚ್ಚೇಗೌಡ ಅವರು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಹೊರಗುತ್ತಿಗೆ ನೌಕರರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.