ತೆಲಂಗಾಣ: ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನಲೆ ತೆಲಂಗಾಣದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿದೆ.
ರಾಜ್ಯಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ 10ನೇ ತರಗತಿ ಪರೀಕ್ಷೆ ನಡೆಸಲು ಆಗುವುದಿಲ್ಲ. 10ನೇ ತರಗತಿಯ ಎಲ್ಲಾ ಮಕ್ಕಳು ಉತ್ತೀರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.
ಈ ಕುರಿತು ತೆಲಂಗಾಣ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು, ಕೊರೋನಾ ಸೋಂಕು ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.