ತೆಲಂಗಾಣದಲ್ಲಿ ಲಾಕ್ ಡೌನ್ ಪಾಲಿಸದಿದ್ದರೆ ಸೂಟ್ ಅಟ್ ಸೈಟ್: ತೆಲಂಗಾಣ ಸಿಎಂ ಕೆಸಿಆರ್

0
85

ಹೈದರಾಬಾದ್: ದೇಶದಲ್ಲಿ ಕೊರೋನಾ ಸೋಂಕು ತಡೆಯಲು ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಆದೇಶಿಸಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಅಥವಾ ಪರಿಸ್ಥಿತಿ ಪೊಲೀಸರ ಕೈ ಮೀರಿದ್ದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಕಂಡಲ್ಲಿ ಗುಂಡು ಆದೇಶ ನೀಡಬೇಕಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಎಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್ ಡೌನ್ ಗೆ ಆದೇಶ ನೀಡಿದ್ದು, ಈ ವೇಳೆ ಯಾರು ಮನೆಯಿಂದ ಹೊರಗೆ ಬರದಂತೆ ಮನವಿ ಮಾಡಿದ್ದರು. ಆದರೆ ತೆಲಂಗಾಣದಲ್ಲಿ ಜನರನ್ನು ಚದುರಿಸಲು ಪೊಲೀಸರು ಪಡುತ್ತಿದ್ದಾರೆ, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ಜನರು ಮನೆಯಿಂದ ಹೊರಗೆ ಬಂದು ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದರೆ ರಾಜ್ಯ ಸರ್ಕಾರ ಕರ್ಫ್ಯೂ ಜಾರಿಗೊಳಿಸಿ, ಕಂಡಲ್ಲಿ ಗುಂಡು(Shoot at Sight) ಆದೇಶ ನೀಡಲಾಗುವುದು ಎಂದು ಕಿಡಿಕಾರಿದ್ದಾರೆ.

ಕ್ವಾರಂಟೈನ್ ನಲ್ಲಿರುವ ಪ್ರಜೆಗಳ ಪಾಸ್ ಪೋರ್ಟ್ ಗಳನ್ನು ಸರ್ಕಾರ ವಶಕ್ಕೆ  ಪಡೆಯುತ್ತಿದೆ. ಯಾರಾದರೂ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದರೆ ಅವರ ಪಾಸ್ ಪೋರ್ಟ್ ರದ್ದು ಮಾಡಲಾಗುವುದು ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಲಾಕ್ ಡೌನ್ ವೇಳೆಯಲ್ಲಿ ಜನರ ಮೂಲಭೂತ ಸೌಕರ್ಯಗಳನ್ನು ಶಾಸಕರು ಮತ್ತು ಕಾರ್ಪೊರೇಟರ್ ಗಳು ಒದಗಿಸಬೇಕೆಂದು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಈಗಾಗಲೇ 36 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 140 ಶಂಕಿತರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.

LEAVE A REPLY

Please enter your comment!
Please enter your name here