ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪಂಜಾಬ್ನ ಮೊಹಾಲಿ ಜಿಲ್ಲೆಯ ಸರ್ಸೆನಿ ಎಂಬ ಗ್ರಾಮದಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ತೈಲ ತುಂಬಿದ್ದ ಟ್ಯಾಂಕರ್ವೊಂದು ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ನಡೆದಿದೆ.
ರಾಮ ಧಾಬಾ ಸಮೀಪದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತೈಲ ತುಂಬಿದ್ದ ಟ್ಯಾಂಕರ್ ನಿಂದ ತೈಲ ಕದಿಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ತೈಲ ಲಿಕೇಜ್ ಆಗಿದ್ದರಿಂದ ಟ್ಯಾಂಕರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಯ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಜಸ್ವಿಂದರ್ ಸಿಂಗ್ (35), ಬಾಬ್ಲು (20) ಮತ್ತು ವಿಕ್ರಮ್ (24) ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಶೇ. 80ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರು ಚಂಡೀಘಡದ ಪಿಜಿಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.