ಉಡುಪಿ: ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿ ಬೀಚ್ ಬಳಿ ಬೈಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದು, ಸವಾರರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಬೈಂದೂರು ಹೇನ್ ಬೇರು ನಿವಾಸಿಗಳಾದ ಶಂಕರ ದೇವಾಡಿಗ ಮತ್ತು ಪ್ರವೀಣ್ ದೇವಾಡಿಗ ಮೃತಪಟ್ಟ ದುರ್ದೈವಿಗಳು. ತ್ರಾಸಿಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ತಕ್ಷಣ ಸವಾರಿಬ್ಬರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಓರ್ವ ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿತ್ತು. ಆಸ್ಪತ್ರೆಯಲ್ಲಿ ಆತನೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.