Sunday, December 3, 2023

Latest Posts

ದಂಪತಿಗೆ ನಟ ನಾಗಭೂಷಣ್ ಕಾರು ಡಿಕ್ಕಿ: ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್ ಹೆಸರಾಂತ ನಟ ನಾಗಭೂಷಣ್ ‌ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

ವಸಂತಪುರದ ನಿವಾಸಿ ಪ್ರೇಮಾ (48) ಮೃತ ದುರ್ದೈವಿ.
ನಿನ್ನೆ ತಡರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ನಾಗಭೂಷಣ್ ಅವರು ತಮ್ಮ ಕಾರಿನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಫುಟ್‌ಪಾತ್‌ನಲ್ಲಿ ವಾಕ್‌ ಮಾಡುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!