Friday, August 19, 2022

Latest Posts

ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಕರಾವಳಿ ಪ್ರದೇಶ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ಬೆಂಗಳೂರು, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕ ಮಂಗಳೂರು, ಹಾಸನ, ಮೈಸೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದ್ದು, ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕ್ಷಿಣ ಒಳನಾಡು, ಕರಾವಳಿ ಪ್ರದೇಶ, ಉತ್ತರ ಒಳನಾಡಿನ ಕೆಲವೆಡೆ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!