Thursday, August 18, 2022

Latest Posts

ದಕ್ಷಿಣ ಕನ್ನಡದಲ್ಲಿ ಒಂದೇ ದಿನ  533 ಮಂದಿ ಡಿಸ್ಟಾರ್ಜ್, 146 ಕೊರೋನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 146 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಕೊರೋನಾ ಸೋಂಕಿನಿಂದ ಮುಕ್ತರಾದ 533 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಂಗಳೂರು ತಾಲೂಕಿನಲ್ಲಿ 4,  ಬೆಳ್ತಂಗಡಿ 1 ಮತ್ತು ಇತರ ಜಿಲ್ಲೆಯ ಮೂರು ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇದುವರೆಗೆ 228 ಮಂದಿ ಸಾವನ್ನಪ್ಪಿದಂತಾಗಿದೆ.
ಸೋಮವಾರ  ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 81 ಸಾಮಾನ್ಯ ಶೀತಜ್ವರ ಪ್ರಕರಣ, ಅಂತಾರಾಷ್ಟ್ರೀಯ ಪ್ರಯಾಣ ಮಾಡಿದ ನಾಲ್ಕು ಮಂದಿ, 16 ಉಸಿರಾಟ ಸಮಸ್ಯೆಯ ಪ್ರಕರಣ ಪತ್ತೆಯಾಗಿದ್ದು, 15 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. 30  ಮಂದಿಯ ಸೋಂಕಿನ ಮೂಲವನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ.
ದ.ಕ.ಜಿಲ್ಲೆಯಲ್ಲಿ ಇದುವರೆಗೆ 7,353 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 4,215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2,910 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!