Thursday, August 18, 2022

Latest Posts

ದಕ್ಷಿಣ ಕನ್ನಡದಲ್ಲಿ ನಾಲ್ಕು ಮಂದಿಗೆ ಪಾಸಿಟಿವ್: ಮೂರು ಮಂದಿಯ ಸೋಂಕಿನ ಮೂಲ ನಿಗೂಢ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ಕು ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 137 ಕ್ಕೆ ಏರಿಕೆಯಾಗಿದೆ.
ಗುಜರಾತ್‌ನಿಂದ ಆಗಮಿಸಿ ಮಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದ 50 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನಲ್ಲಿ ಸೋಂಕು ಕಂಡು ಬಂದಿದ್ದು, ಇವರಿಗೆ ಸೋಂಕು ಎಲ್ಲಿಂದ ತಗುಲಿತು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಯಲ್ಲಿ ಕೂಡ ಸೋಂಕು ಕಂಡು ಬಂದಿದೆ.  ಇವರ ಸೋಂಕಿನ ಮೂಲ ಕೂಡ ನಿಗೂಢವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!