Monday, July 4, 2022

Latest Posts

ದಕ್ಷಿಣ ಕನ್ನಡದಲ್ಲಿ ಮತ್ತೆ ಕೊರೋನಾ ಅಬ್ಬರ: ಭಾನುವಾರ 14 ಮಂದಿಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಭಾನುವಾರ ಮತ್ತೆ 14 ಮಂದಿಯಲ್ಲಿ ಸೋಂಕು ದೃಢಗೊಂಡಿದೆ. ಜಿಲ್ಲೆಯಲ್ಲಿ ಶನಿವಾರವೂ 14 ಪ್ರಕರಣ ಕಾಣಿಸಿಕೊಂಡಿದ್ದು, ಭಾನುವಾರ ಅಷ್ಟೇ ಸಂಖ್ಯೆಯ ಜನರಿಗೆ ಕೋವಿಡ್ ವೈರಸ್ ವಕ್ಕರಿಸಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿದವರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜಿಲ್ಲೆಗೆ ಮಹಾ ಕಂಟಕ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದವರಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅವರು ವಾಸವಿರುವ ಪ್ರದೇಶ ಸೀಲ್‌ಡೌನ್ ಮಾಡಬೇಕಾದ ಸ್ಥಿತಿ ಉಂಟಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss