Wednesday, August 17, 2022

Latest Posts

ದಕ್ಷಿಣ ಕನ್ನಡದಲ್ಲಿ ಶುಕ್ರವಾರ 17 ಪಾಸಿಟಿವ್: ಸೋಂಕಿತರ ಸಂಖ್ಯೆ 241ಕ್ಕೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 17 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ವಿದೇಶದಿಂದ ವಿಮಾನದಲ್ಲಿ ಆಗಮಿಸಿದವರು ಮತ್ತು ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಲೇ ಇದ್ದು, ಶುಕ್ರವಾರ ಒಂದು ಪ್ರಕರಣ ಹೊರತುಪಡಿಸಿ ಉಳಿದ ಎಲ್ಲವೂ ಇವೆರಡು ಮೂಲಕ್ಕೆ ಸೇರಿದ ಪ್ರಕರಣಗಳಾಗಿವೆ.
ಶುಕ್ರವಾರದ 17 ಪ್ರಕರಣಗಳ ಪೈಕಿ 70 ವರ್ಷದ ಪುರುಷರೊಬ್ಬರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ. ಉಳಿದ 14 ಮಂದಿ ಸೋಂಕಿತರು ಯುಎಇನಿಂದ ಆಗಮಿಸಿದವರು. ಇವರೆಲ್ಲರನ್ನೂ ಚಿಕಿತ್ಸೆಗಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 241ಕ್ಕೆ ಏರಿಕೆಯಾಗಿದೆ. ಗುರುವಾರ ಜಿಲ್ಲೆಯಲ್ಲಿ ಇಬ್ಬರಲ್ಲಿ ಕೊರೋನಾ ಕಾಣಿಸಿಕೊಂಡಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!