ಹೊಸ ದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 54 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದೇ ವೇಳೆ
ಕೊರೋನಾದಿಂದ ಗುಣಮುಖರಾದ 54 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದ.ಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 200 ಮಂದಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು 31,438 ಮಂದಿ ಸೋಂಕಿತರ ಪೈಕಿ ಈಗಾಗಲೇ 30, 073 ಮಂದಿ ಗುಣಮುಖರಾಗಿದ್ದು, ಪ್ರಸ್ತುತ 665 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು13,493 ಮಾಸ್ಕ್ ಉಲ್ಲಂಘನೆ ಪ್ರಕರಣಗಳಲ್ಲಿ 14,59,642 ರೂ. ದಂಡ ವಸೂಲಿ ಮಾಡಲಾಗಿದೆ.