ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದ್ದು, ಕೋವಿಡ್ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರಿಗೂ ಈಗ ಸೋಂಕು ಅಂಟಿದೆ. ನಗರದಲ್ಲಿ ಇಬ್ಬರು ಪತ್ರಕರ್ತರಿಗೆ ಭಾನುವಾರ ಕೊರೋನಾ ಸೋಂಕು ದೃಢಪಟ್ಟಿದೆ.
ಸುದ್ದಿವಾಹಿನಿಗಳ ಇಬ್ಬರು ಜಿಲ್ಲಾ ಕ್ಯಾಮೆರಾಮನ್ಗಳಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಮಂಗಳೂರಿನಲ್ಲಿ ಈ ಹಿಂದೆ ಎಲ್ಲ ಪತ್ರಕರ್ತರಿಗೆ ಕೊರೋನಾ ಪರೀಕ್ಷೆ ನಡೆಸಿದಾಗ ಇವರಿಬ್ಬರ ವರದಿ ನೆಗೆಟಿವ್ ಬಂದಿತ್ತು. ಆದರೆ, ಕೆಲ ದಿನಗಳ ಹಿಂದೆ ಇವರಿಗೆ ಕೊರೋನಾ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಪರೀಕ್ಷೆ ನಡೆಸಲಾಗಿದೆ. ಈಗ ಇಬ್ಬರಿಗೂ ಕೊರೋನಾ ಇರುವುದು ದೃಢಪಟ್ಟಿದೆ. ಪ್ರಸ್ತುತ ಇಬ್ಬರೂ ಕೊರೋನಾ ಸೋಂಕಿತ ಪತ್ರಕರ್ತರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.