Thursday, August 18, 2022

Latest Posts

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.
ಸಿಂಧು ಬಿ.ರೂಪೇಶ್ ಅವರನ್ನು ಬೆಂಗಳೂರಿನ ಇಲೆಕ್ಟ್ರಾನಿಕ್ಸ್ ಆಫ್ ಸಿಟಿಜನ್ ಸರ್ವೀಸಸ್ (ಇಡಿಸಿಎಸ್) ನಿರ್ದೇಶಕರ ಹುದ್ದೆಗೆ ನಿಯುಕ್ತಿ ಮಾಡಲಾಗಿದೆ. ಸಿಂಧು ರೂಪೇಶ್ 2019 ಸೆ.7ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕರ್ತವ್ಯದಲ್ಲಿದ್ದರು. ಅದಕ್ಕೂ ಮೊದಲು ಅವರು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಡಾ.ರಾಜೇಂದ್ರ ಕೆ.ವಿ ತೀರ್ಥಹಳ್ಳಿಯವರು. ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 32ನೆಯ ರಾಂಕ್ ಗಳಿಸಿದ್ದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಣೆಯ ಮಾಡಿದ್ದಾರೆ. ಅಲ್ಲಿಂದ ದಕ್ಷಿಣ ಕನ್ನಡಕ್ಕೆ ವರ್ಗಾವಣೆಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!