Wednesday, August 10, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 217 ಮಂದಿಗೆ ಕೊರೋನಾ ಪಾಸಿಟಿವ್, 190 ಮಂದಿ ಚೇತರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದೆ. ಸೋಮವಾರ 217 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು 7 ಮಂದಿ ಸಾವನ್ನಪ್ಪಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಗೆ ವಕ್ಕರಿಸಿದ ಕೊರೋನಾ ದಿನೇ ದಿನೇ ತನ್ನ ಕಬಂಧಬಾಹುಗಳನ್ನು ವ್ಯಾಪಿಸುತ್ತಲೇ ಇದೆ. ಇತರೆ ಕಾಯಿಲೆ ಹಾಗೂ ಕೊರೋನಾ ಸೋಂಕಿನಿಂದಾಗಿ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 7 ಮಂದಿ ಸೋಮವಾರ ಸಾವನ್ನಪ್ಪಿದರೆ, 190 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss