Wednesday, July 6, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಮಂದಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 35 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ವೇಳೆ ಸೋಂಕು ಮುಕ್ತರಾದ 41 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 31, 994 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 30,705 ಮಂದಿ ಗುಣಮುಖರಾಗಿದ್ದಾರೆ.‌713 ಮಂದಿ ಮೃತಪಟ್ಟಿದ್ದಾರೆ. ಸದ್ಯ 576 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ15,071 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು 16,18,022 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss