ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 192 ಮಂದಿಗೆ ಅಣಕು ಲಸಿಕೆ ಪ್ರಯೋಗ

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ 9 ಕೇಂದ್ರಗಳಲ್ಲಿ ಕೊರೋನಾ ಲಸಿಕೆಗೆ ಪೂರ್ವಭಾವಿಯಾಗಿ ಶುಕ್ರವಾರ ಆಯೋಜಿಸಿದ್ದ ಅಣಕು ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಇಂಡಿಯಾನ ಆಸ್ಪತ್ರೆ, ಸುರತ್ಕಲ್‌ನ ನಗರ ಸಾರ್ವಜನಿಕ ಆರೋಗ್ಯ ಕೇಂದ್ರ, ಬಂಟ್ವಾಳ ತಾಲೂಕು ಆಸ್ಪತ್ರೆ, ಕಡಬ ಸಮುದಾಯ ಆರೋಗ್ಯ ಕೇಂದ್ರ, ನಾರಾವಿ ಆರೋಗ್ಯ ಕೇಂದ್ರ, ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು, ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗಳಲ್ಲಿ ಶುಕ್ರವಾರ ಅಣಕು ಲಸಿಕಾ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು. 192 ಮಂದಿಗೆ ಅಣಕು ಲಸಿಕೆ ನೀಡಲಾಗಿದೆ. ಪ್ರತಿ ಕೇಂದ್ರದಲ್ಲಿ 23 ಮಂದಿ ಅಣಕು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss