ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 31 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 34151 ಕ್ಕೆ ಏರಿಕೆಯಾಗಿದೆ. ಈ ಪೈಕಿ 334 ಸಕ್ರಿಯ ಪ್ರಕರಣಗಳು. 33077 ಮಂದಿ ಗುಣಮುಖರಾಗಿದ್ದಾರೆ. 740 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 31871 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, ಒಟ್ಟು 3308370 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.