Monday, August 15, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
22 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ
ಈಗ ಒಟ್ಟು ಸೋಂಕಿತರ ಸಂಖ್ಯೆ 34449ಕ್ಕೆ ಏರಿಕೆಯಾಗಿದೆ. ಈ ಪೈಕಿ 195 ಸಕ್ರಿಯ ಪ್ರಕರಣಗಳು. 33514 ಮಂದಿ ಗುಣಮುಖರಾಗಿದ್ದಾರೆ. 740 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 34805 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 3587910 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss