ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರುಮುಖವಾಗಿದ್ದು, ಹೊಸ ಪ್ರಕರಣಗಳ ಪತ್ತೆ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.
ಶುಕ್ರವಾರ 211 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 33 ಮಂದಿ ಗುಣಮುಖರಾಗಿದ್ದಾರೆ. ಶುಕ್ರವಾರ ಜಿಲ್ಲೆಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರದ ವಿವರವನ್ನು ಜಿಲ್ಲಾಡಳಿತ ಒದಗಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 117048ಕ್ಕೆ ಏರಿಕೆಯಾಗಿದೆ. ಈ ಪೈಕಿ 713 ಸಕ್ರಿಯ ಪ್ರಕರಣಗಳು. 114631 ಮಂದಿ ಗುಣಮುಖರಾಗಿದ್ದಾರೆ. 1704 ಮಂದಿ ಮೃತಪಟ್ಟಿದ್ದಾರೆ.