ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಪಾಸಿಟಿವ್, 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೆ 8 ಮಂದಿ ಬಲಿಯಾಗಿದ್ದು, ಶನಿವಾರ 218 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಶನಿವಾರ 140 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಪತ್ತೆಯಾದ 218 ಪ್ರಕರಣಗಳ ಪೈಕಿ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 46 ಮಂದಿಗೆ, ಶೀತಜ್ವರದ ಲಕ್ಷಣದೊಂದಿಗೆ 87 ಮಂದಿಗೆ, ತೀವ್ರ ಉಸಿರಾಟ ಸಮಸ್ಯೆಯ 15 ಮಂದಿಗೆ ಕೊರೋನಾ ಕಾಣಿಸಿಕೊಂಡಿದೆ. 70 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ 4612 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ 2370 ಸಕ್ರಿಯ ಪ್ರಕರಣಗಳಾಗಿವೆ. 115 ಮಂದಿ ಮೃತಪಟ್ಟಿದ್ದಾರೆ. 2127 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
8 ಮಂದಿ ಮೃತ
ಮಂಗಳೂರು ನಿವಾಸಿಗಳಾದ 67,68, 78, 88, 68, 75, 76 ವರ್ಷದ ಗಂಡಸರು, ಕಾಸರಗೋಡು ಮಂಜೇಶ್ವರದ 53 ವರ್ಷದ ಹೆಂಗಸು ವಿವಿಧ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದು, ಇವರೆಲ್ಲರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss