Wednesday, June 29, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೆ ಮೂವರ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸರಣಿ ಮುಂದುವರೆದಿದ್ದು, ಕೋವಿಡ್ 19ಗೆ ಮತ್ತೆ ಮೂವರ ಬಲಿಯಾಗಲಿದೆ.
ಡಯಾಬಿಟೀಸ್, ಅಸ್ತಮಾ ಕಾಯಿಲೆ ಹೊಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಕಲೇಶಪುರ ಮೂಲದ 65 ವರ್ಷ ಪ್ರಾಯದ ಮಹಿಳೆ ಜು.13ರಂದು ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆಯೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಮೂಲದ 55 ವರ್ಷದ ಪುರುಷ ಜು.13ರಂದು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss