ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬುಧವಾರ ಮತ್ತೆ 208 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಕೊರೋನಾ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ 118 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಪಡುಬಿದ್ರೆಯ 52 ವರ್ಷದ ವ್ಯಕ್ತಿ, ಬಂಟ್ವಾಳದ 62 ವಷ೯ದ ವೃದ್ಧ, ಮಂಗಳೂರಿನ 69 ವರ್ಷದ ವೃದ್ಧೆ ಹಾಗೂ 73 ವರ್ಷದ ವೃದ್ಧ, ಧಾರವಾಡದ 66 ವರ್ಷದ ವೃದ್ಧ, ಕಾರವಾರದ 66 ವರ್ಷದ ವೃದ್ಧ ಹಾಗೂ ಮಂಗಳೂರಿನ 39 ವರ್ಷದ ವ್ಯಕ್ತಿ ಸಾವನ್ನಪ್ಪಿದವರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದವರೆಗೆ ಒಟ್ಟು 142 ಮಂದಿ ಸಾವನ್ನಪ್ಪಿದಂತಾಗಿದೆ.
ಬುಧವಾರ ಪತ್ತೆಯಾದ ಒಟ್ಟು 208 ಪಾಸಿಟಿವ್ ಪ್ರಕರಣಗಳ ಪೈಕಿ 65 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. ಸಾಮಾನ್ಯ ಶೀತ ಜ್ವರ ಪ್ರಕರಣ 73, ಉಸಿರಾಟ ಸಮಸ್ಯೆಯ 12 ಪ್ರಕರಣವಾಗಿದೆ. 58 ಮಂದಿಯ ಸೋಂಕಿನ ಮೂಲ ಇನ್ನೂ ಪತೆಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5311 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 2456 ಮಂದಿ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2715 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.