ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 132 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿನಿಂದ ಮುಕ್ತರಾದ 195 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.6 ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಇಬ್ಬರು, ಬಂಟ್ವಾಳದ ಇಬ್ಬರು, ಸುಳ್ಯ 1 ಮತ್ತು ಇತರ ಜಿಲ್ಲೆಯ ಒಬ್ಬರು ಸೇರಿದ್ದಾರೆ.
ಪಾಸಿಟಿವ್ ಕಂಡು ಬಂದ 132 ಮಂದಿಯಲ್ಲಿ 21 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. ಸಾಮಾನ್ಯ ಶೀತಜ್ವರ ಪ್ರಕರಣ 68,ಉಸಿರಾಟ ಸಮಸ್ಯೆಯ 11 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 32 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ 7,207 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 3,682 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ಆಸ್ಪತ್ರೆಯಲ್ಲಿ 3,305 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಒಟ್ಟು 7,207 ಪಾಸಿಟಿವ್ ಪ್ರಕರಣಗಳ ಪೈಕಿ ಮಂಗಳೂರಿನಲ್ಲಿ 5023, ಮೂಡಬಿದಿರೆ 98, ಮುಲ್ಕಿ 91, ಬಂಟ್ವಾಳ 689, ಬೆಳ್ತಂಗಡಿ 970, ಪುತ್ತೂರು 351, ಕಡಬ 55, ಸುಳ್ಯ 93 ಮತ್ತು ಇತರ ಜಿಲ್ಲೆಯ 437 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.