Thursday, August 11, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 229 ಮಂದಿಗೆ ಕೊರೋನಾ ಪಾಸಿಟಿವ್; 498 ಮಂದಿ ಡಿಸ್ಚಾರ್ಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಬುಧವಾರ 229 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದರೆ 498 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 7 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರು ತಾಲೂಕಿನ ಇಬ್ಬರು, ಬಂಟ್ವಾಳ 1,ಮೂಡಬಿದಿರೆ 1ಮತ್ತು ಇತರ ಜಿಲ್ಲೆಯ ಮೂರು ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಪಾಸಿಟಿವ್ ಕಂಡು ಬಂದವರ ಪೈಕಿ 36 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. ಸಾಮಾನ್ಯ ಶೀತಜ್ವರ ಪ್ರಕರಣ 113,ಉಸಿರಾಟ ಸಮಸ್ಯೆಯ 11 ಪ್ರಕರಣಗಳು ಪತ್ತೆಯಾಗಿದ್ದು,  69 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಈ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7,825 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 5232 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2,349 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 244 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 59,750 ಮಂದಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು,  51,925 ನೆಗೆಟಿವ್ ಮತ್ತು 7825 ಪಾಸಿಟಿವ್ ಕಂಡುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss