ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ಸೋಮವಾರ 144 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 9,022 ಪಾಸಿಟಿವ್ ಪ್ರಕರಣಗಳು ಪತ್ತೆಯಾದಂತಾಗಿದೆ.
ಸೋಮವಾರ ಒಟ್ಟು 144 ಪಾಸಿಟಿವ್ ದೃಢಪಟ್ಟರೆ ಇದೇ ವೇಳೆ 8 ಮಂದಿ ಸಾವನ್ನಪ್ಪಿದ್ದಾರೆ. ಕೊರೋನಾ ಮುಕ್ತರಾದ 209 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂರು ಮಂದಿ, ಬಂಟ್ವಾಳ 1, ಪುತ್ತೂರು 1 ಮತ್ತು ಇತರ ಜಿಲ್ಲೆಯ ಮೂರು ಮಂದಿ ಸೇರಿದ್ದಾರೆ. ಪತ್ತೆಯಾದ 144 ಪಾಸಿಟಿವ್ ಪ್ರಕರಣಗಳಲ್ಲಿ 21 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. 60 ಸಾಮಾನ್ಯ ಶೀತಜ್ವರ ಪ್ರಕರಣ, ಉಸಿರಾಟ ಸಮಸ್ಯೆಯ 16 ಪ್ರಕರಣ ಪತ್ತೆಯಾಗಿದೆ.47 ಮಂದಿಯ ಸೋಂಕಿನ ಮೂಲ ಇನ್ನೂ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ 70,657 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷೆ ನಡೆದಿದ್ದು,ಈ ಪೈಕಿ 9,022 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. 61,635 ಪ್ರಕರಣಗಳು ನೆಗೆಟಿವ್ ಆಗಿದೆ. ಇದುವರೆಗೆ ಒಟ್ಟು 277 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2091 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,654 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ.