Sunday, August 14, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರದ ಗಡಿ ದಾಟಿದ ಕೋರೋನಾ ಪ್ರಕರಣ: ಶನಿವಾರ 228 ಪಾಸಿಟಿವ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ.
ಶನಿವಾರ ಒಂದೇ ದಿನ 228 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಮಂಗಳೂರಿನಲ್ಲಿ 150, ಬಂಟ್ವಾಳದಲ್ಲಿ 23, ಪುತ್ತೂರಿನಲ್ಲಿ 15, ಸುಳ್ಯದಲ್ಲಿ 8, ಬೆಳ್ತಂಗಡಿಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 25 ಮಂದಿಗೆ ಪಾಸಿಟಿವ್‌ ಆಗಿದೆ. ಶನಿವಾರ 320 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 7513 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss