ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್: ಏನು ಇದೆ? ಏನು ಇಲ್ಲ?

0
1079

ಮಂಗಳೂರು: ಮೇ 23 ಶನಿವಾರ ಸಂಜೆ ೭ರಿಂದ ಮೇ 25 ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ದಿನಪತ್ರಿಕೆ, ತರಕಾರಿ, ಮೀನು-ಮಾಂಸ, ಹಾಲು ಮತ್ತು ಔಷಧಿ ಪೂರೈಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ಇತರ ಎಲ್ಲ ಅಂಗಡಿಗಳು/ಹೊಟೇಲು/ಬಾರ್‌ಗಳು ಮುಚ್ಚಿರುತ್ತವೆ. ಎಲ್ಲ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮೇ 24ರಂದು ಈಗಾಗಲೇ ನಿಗದಿಯಾಗಿರುವ ಹಾಗೂ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳನ್ನು ಸರಕಾರ ನೀಡುವ ಮಾರ್ಗಸೂಚಿಯಂತೆ ನಡೆಸಬಹುದು. ಮದುವೆ ಪ್ರಯುಕ್ತ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವ ಅವಶ್ಯಕತೆ ಇದ್ದಲ್ಲಿ, ಖಾಸಗಿ ವಾಹನಗಳಿಗೆ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯಬೇಕು ಎಂದು ಡಿಸಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here