Monday, August 8, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಸಂಜೆಯಿಂದ ನಿರಂತರ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಕ್ಷೀಣಗೊಂಡಿದ್ದ ಮಳೆ ಕಳೆದ ರಾತ್ರಿಯಿಂದ ಅಬ್ಬರದಿಂದ ಸುರಿಯಲಾರಂಭಿಸಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆ ಸಂಚಾರ ವ್ಯತ್ಯಯವಾಗಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆ.20ರಂದು ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಹಾಗೂ
ಸೆ.21, 22 ರಂದು ರೆಡ್ ಆಲರ್ಟ್ ಘೋಷಿಸಿದೆ. ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಮೀನುಗಾರರು ಕಡಲಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಒಬ್ಬ ಸಾವು
ತಡೆಗೋಡೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ನಡೆದಿದೆ.
ಇಂದು ಬೆಳಗಿನ ತನಕ ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ಸರಾಸರಿ 41.3 ಮಿಲಿ ಮೀಟರ್ ಮಳೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss