ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪ್ರಕರಣ

0
151
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬುಧವಾರ ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾದಂತಾಗಿದೆ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರು ಮಾ.20ರಂದು ದುಬೈನಿಂದ ವಿಮಾನದ ಮೂಲಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಲ್ಲಿಂದ ಖಾಸಗಿ ಟ್ಯಾಕ್ಸಿ ಮೂಲಕ ಪುತ್ತೂರಿಗೆ ಆಗಮಿಸಿದ್ದರು. ಮಾ.೨೮ರಂದು ಗಂಟಲು ನೋವು ಕಾಣಿಸಿಕೊಂಡ ಪರಿಣಾಮ ಅವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಗಂಟಲಿನ ದ್ರವ ಮಾದರಿ ಕಳುಹಿಸಲಾಗಿದ್ದು, ಬುಧವಾರ ಸೋಂಕು ದೃಡಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here