ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ಕೊರೋನಾ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದಾರೆ.
ವೆನ್ಲಾಕ್ ಆಸ್ಪತ್ರೆಗೆ ಮಾ. 19ರಂದು ದಾಖಲಾಗಿದ್ದ, 22 ವರ್ಷದ ಭಟ್ಕಳ ಮೂಲದ ಕೊರೋನಾ ಸೋಂಕಿತ ವ್ಯಕ್ತಿ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಏ.2 ಮತ್ತು ೩ರಂದು ಮತ್ತೆ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ನೆಗೆಟಿವ್ ಆಗಿದೆ. ಇವರನ್ನು ಏ.6ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಇವರನ್ನು ಭಟ್ಕಳಕ್ಕೆ ಕಳುಹಿಸಿಕೊಡಲಾಗುತ್ತಿದ್ದು, 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ.