Tuesday, June 28, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಳೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೋಮವಾರ ಬೆಳಗ್ಗೆ 8.30ರಿಂದ ಮಂಗಳವಾರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಇರಲಿದೆ. ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯ ಅಲ್ಲಲ್ಲಿ ಭಾರಿಯಿಂದ ಅತಿಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಿಲ್ಲೆಯ ಸುಬ್ರಹ್ಮಣ್ಯ ಸುತ್ತಲಿನ ಪ್ರದೇಶದಲ್ಲಿ ಮೂರ್‍ನಾಲ್ಕು ದಿನಗಳಿಂದ ಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದೆ. ಮಂಗಳೂರಿನಲ್ಲೂ ಸಂಜೆ ವೇಳೆ ಸಾಧಾರಣ ಮಳೆ ಸುರಿಯುತ್ತಿದೆ. ಭಾನುವಾರ ನಗರದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಮತ್ತು ಬಿಸಿಲಿನ ಕಣ್ಣಾಮುಚ್ಚಾಲೆಯಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss