ದಕ್ಷಿಣ ಕನ್ನಡ ಜಿಲ್ಲೆ: ಕೊರೋನಾ ಸಂಬಂಧಿಸಿದಂತೆ 9 ಮಂದಿಯ ಪರೀಕ್ಷಾ ವರದಿ ನೆಗೆಟಿವ್

0
66

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕೊರೋನಾ ಸಂಬಂಧಿಸಿದಂತೆ 9 ಮಂದಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.
48 ಮಂದಿಯನ್ನು ಸೋಮವಾರ ತಪಾಸಣೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 38279 ಜನರನ್ನು ತಪಾಸಣೆ ನಡೆಸಲಾಗಿದೆ. ಇದುವರೆಗೆ ಒಟ್ಟು ೫೮೭೫ ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.ಮಂಗಳೂರಿನ ಇ ಎಸ್ ಐ ಆಸ್ಪತ್ರೆಯಲ್ಲಿ ೨೮ ಮಂದಿಯನ್ನು ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ.ಒಟ್ಟು ೧೬೯ ಮಂದಿ ೨೮ ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಮುಗಿಸಿದ್ದಾರೆ.ಸೋಮವಾರ ೮ ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ೪ ಮಂದಿಯನ್ನು ಅಬ್ಸರ್ವೇಶನ್ ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಶಾ ಕಾರ್ಯಕರ್ತೆ ಯರು ಮನೆ ಮನೆಗೆ ಭೇಟಿ ನೀಡುತ್ತಿದ್ದು ಇದು ವರೆಗೆ ೩ ೭೭೫೬೯ ಮನೆಗಳಿಗೆ ಭೇಟಿ ನೀಡಿ ೧೫೩೩೭೮೩ ಮಂದಿಗೆ ಜಾಗೃತಿ ಮೂಡಿಸಲಾಗಿದೆ.ವಿದೇಶದಿಂದ ಆಗಮಿಸಿ ದವರು ಮನೆಯಲ್ಲಿಯೇ ಇರಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here