ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗುರುವಾರ ಆರೆಂಜ್ ಅಲರ್ಟ್, ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಗುರುವಾರ ಬೆಳಗ್ಗಿನಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಶುಕ್ರವಾರ 204.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು. ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರದ ಕೆಳಗೆ ನಿಲ್ಲಬಾರದು. ಜಿಲ್ಲಾ , ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಪಿಡಿಒ ಮತ್ತು ಗ್ರಾಮ ಕರಣಿಕರು ಗ್ರಾಪಂ ವ್ಯಾಪ್ತಿಯಲ್ಲಿ ಸನ್ನದ್ದರಿದ್ದು, ವಿಪತ್ತು ಸಂಭವಿಸಿದರೆ ತಕ್ಷಣ ಸ್ಪಂದಿಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ದೂ.1077 ಕ್ಕೆ ದಿನದ 24 ಗಂಟೆಯೂ ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.